Thursday, 21 January 2010


ನಿನ್ನನರಸುತ ಹೊರಟ

ಎಷ್ಟೋ ದಿನಗಳ ಕನಸು

ನನಸಾದ ದಿನವೆಂದು

ಕಲ್ಪನೆಗೂ ಮೀರಿ ಕುಣಿದೆ







ಕವಿದ ಮಂಜಿನ ಹನಿಯಲಿ

ಮುಳುಗೇಳುತಿರುವ ನಗುವಿನ ಒಳಗೆ

ಸಣ್ಣ ದನಿಯ ಮಾತೊಂದು

ಹೊರಹೊಮ್ಮುತಿದೆ


ಮುಸುಕಿದ ಮಂಜಿನ ಒಳಗೆ

ಬಿರುಸುಗೊಂಡ ನೋಟ

ಕಣ್ಣಾಯಿಸಿದೆಲ್ಲಲ್ಲ ಹೂರಾಶಿ

ಸುವಾಸನೆಯ ತಂಪು


ಉಕ್ಕುವ ಕಡಲ ಕಿನಾರೆ

ಅಳಿವಿಲ್ಲದ ಒಲವಿನ ಪಾದಕೆ

ಮೃದುವೆನ್ನುವ ಸ್ಪರ್ಶ

1 comment:

Anonymous said...

ಕತ್ತಳಲ್ಲಿಯು ಸಹ ಬೆಳಕನ್ನು ಹುಡುಕುವ ನಿಮ್ಮ ಆಶಾಭಾವವು ಮೆಚ್ಚತಕ್ಕದಾಗಿದೆ. ನಿಮ್ಮ ಕವಿತೆಯು ಹೀಗೆ ಮುಂದುವರಿಯುತ್ತಿರಲಿ